Categories: ಗುಜರಾತ್

ಅಹಮದಾಬಾದ್: ಅಮುಲ್‌ ಹಾಲಿನ ದರ ಲೀಟರ್‌ಗೆ 2 ರೂ. ಏರಿಕೆ

ಅಹಮದಾಬಾದ್: ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (ಜಿಸಿಎಂಎಂಎಫ್) ಶನಿವಾರ ರಾಜ್ಯದಲ್ಲಿ ಅಮುಲ್ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.

2022ರ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ನಂತರ ಹಾಲಿನ ದರದಲ್ಲಿ ಮೊದಲ ಏರಿಕೆಯಾಗಿದೆ. ರಾಜ್ಯದ ಹಾಲಿನ ಸಹಕಾರಿ ಸಂಘಗಳ ಉನ್ನತ ಸಂಸ್ಥೆಯಾಗಿರುವ ಜಿಸಿಎಂಎಂಎಫ್ ಸಾಮಾನ್ಯವಾಗಿ ಹಾಲಿನ ದರ ಏರಿಕೆಯನ್ನು ಮುಂಚಿತವಾಗಿಯೇ ಘೋಷಿಸುತ್ತದೆ ಆದರೆ ಈ ಬಾರಿ ಹಾಗೆ ಮಾಡಿಲ್ಲ. ಹೆಚ್ಚುತ್ತಿರುವ ಮೇವು ಮತ್ತು ಸಾಗಾಣಿಕೆ ಬೆಲೆಗಳಿಂದಾಗಿ ಹಾಲಿನ ಉತ್ಪಾದನಾ ವೆಚ್ಚದ ಹೆಚ್ಚಳವು ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಲೆ ಪರಿಷ್ಕರಣೆ ನಂತರ, ಅಮುಲ್ ಎಮ್ಮೆ ಹಾಲಿನ ಬೆಲೆ ಈಗ ಲೀಟರ್‌ಗೆ 68 ರೂ. ಆಗಿದ್ದರೆ, ಅಮುಲ್ ಗೋಲ್ಡ್ ಪ್ರತಿ ಲೀಟರ್‌ಗೆ 64 ರೂ. ಮತ್ತು ಅಮುಲ್ ಶಕ್ತಿ ಲೀಟರ್‌ಗೆ 58 ರೂ. ಅಮುಲ್ ಹಸುವಿನ ಹಾಲಿನ ಬೆಲೆ ಈಗ ಲೀಟರ್‌ಗೆ 54 ರೂ., ಅಮುಲ್ ತಾಜಾ ಲೀಟರ್‌ಗೆ 52 ರೂ. ಮತ್ತು ಅಮುಲ್ ಟಿ-ಸ್ಪೆಷಲ್ ಲೀಟರ್‌ಗೆ 60 ರೂ. ಆಗಿದೆ.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

3 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

26 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

53 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago