ಗುಜರಾತ್

ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆ’ಗೆ ಚಾಲನೆ ನೀಡಿದ ಅಮಿತ್ ಶಾ

ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಆ.13) ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡಾ ಉಪಸ್ಥಿತರಿದ್ದರು. ಈ ವರ್ಷ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಪ್ರತಿಯೊಬ್ಬರು ಭಾಗವಹಿಸುವಂತೆ ಪ್ರಧಾನಿ ಮೋದಿ ಜನರಲ್ಲಿ ಮನವಿ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ದೇಶಕ್ಕಾಗಿ ನಾವು ಸಾಯಲು ಸಾಧ್ಯವಿಲ್ಲ. ಆದರೆ ದೇಶಕ್ಕಾಗಿ ಬದುಕುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

2022ರ ಆಗಸ್ಟ್ 15 ರಂದು ತ್ರಿವರ್ಣ ಧ್ವಜ ಹಾರಿಸದ ಮನೆ ಇಲ್ಲ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಇಡೀ ರಾಷ್ಟ್ರವು ತಿರಂಗಮಯವಾಗುತ್ತದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಪ್ರಧಾನಿ ಮೋದಿಯವರು ಇಡೀ ರಾಷ್ಟ್ರದಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬಲು ಪ್ರಯತ್ನಿಸಿದರು ಎಂದು ಹೇಳಿದರು.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

10 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

19 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

31 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

49 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

55 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago