ಗುಜರಾತ್: ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ.
ನೀಲೇಶ್ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು.
ನೀಲೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.
ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ.
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…