News Karnataka Kannada
Tuesday, April 30 2024
ಗುಜರಾತ್

ಜಾಮ್ ನಗರ್: ಹೋಟೆಲ್ ನಲ್ಲಿ ಬೆಂಕಿ ಅವಘಡ, 27 ಜನರ ರಕ್ಷಣೆ

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : Wikimedia

ಜಾಮ್ ನಗರ್: ಗುಜರಾತ್ ನ ಜಾಮ್ ನಗರ್ ಬಳಿಯ ಅಲೆಂಟೊ ಹೋಟೆಲ್ ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಅಗ್ನಿಶಾಮಕ ದಳದ ತಂಡಗಳು ಕಾರ್ಯಾಚರಣೆ ನಡೆಸಿದ್ದು 27 ಜನರನ್ನು ರಕ್ಷಿಸಿದ್ದಾರೆ, ಮೂವರು ಸಿಬ್ಬಂದಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಜಿಲ್ಲಾಧಿಕಾರಿ ಸೌರಭ್ ಪಾರ್ಧಿ ಮತ್ತು ಡಿಎಸ್ಪಿ ಪ್ರೇಮ್ಸುಖ್ ದೇಲು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹೋಟೆಲ್ ನ 36 ಕೊಠಡಿಗಳ ಪೈಕಿ 18 ಕೊಠಡಿಗಳನ್ನು 27 ಅತಿಥಿಗಳು ಉಳಿದುಕೊಂಡಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು