ಗುಜರಾತ್: ಗುಜರಾತ್ನ ವಲ್ಸಾದ್ ರೈಲು ನಿಲ್ದಾಣದಿಂದ ಸೂರತ್ ಕಡೆಗೆ ಹೊರಟ ಶ್ರೀ ಗಂಗಾನಗರ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಗುಜರಾತ್ನ ವಲ್ಸಾದ್ ರೈಲು ನಿಲ್ದಾಣದಿಂದ ಹೊರಟಿದ್ದು ಎಕ್ಸ್ಪ್ರೆಸ್ ರೈಲಿನ ಜನರೇಟರ್ ಕೋಚ್ನಲ್ಲಿ ಪಕ್ಕದ ಪ್ರಯಾಣಿಕರ ಕೋಚ್ನಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪಶ್ಚಿಮ ರೈಲ್ವೆಯ ಸಿಪಿಆರ್ಒ ಸುಮಿತ್ ಠಾಕೂರ್ ಹೇಳಿದ್ದಾರೆ.
ಘಟನೆ ಬಳಿಕ ಕೋಚ್ನ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಈ ರೈಲಿನಿಂದ ಕೋಚ್ ಅನ್ನು ಬೇರ್ಪಡಿಸಿದ ನಂತರ ಪ್ರಯಾಣ ಬೆಳೆಸಲಿದೆ ಎಂದು ಹೇಳಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಪವರ್ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಬಿ1 ಕೋಚ್ಗೆ ವ್ಯಾಪಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕರಂರಾಜ್ ವಘೇಲಾ ತಿಳಿಸಿದ್ದಾರೆ, ಈಗ ಬೆಂಕಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಸುರಕ್ಷತೆಗಾಗಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.