Categories: ಗುಜರಾತ್

ಗುಜರಾತ್ : ಸಂಚಾರಿ ಪೊಲೀಸರಿಗೆ ಎಸಿ ಹೆಲ್ಮೆಟ್

ಗಾಂಧಿನಗರ: ಬಿಸಿಲಿನ ತಾಪಕ್ಕೆ ಬೇಸತ್ತು ಗುಜರಾತ್‍ನ ಪೊಲೀಸ್ ಇಲಾಖೆ ಸಂಚಾರಿ ಪೊಲೀಸರಿಗೆ ವಿಶೇಷ ಹವಾನಿಯಂತ್ರಿತ ಹೆಲ್ಮೆಟ್‍ಗಳನ್ನು ಪರಿಚಯಿಸಿದೆ.

ಈ ಹೆಲ್ಮೆಟ್ 40-42 ಡಿಗ್ರಿ ಸೆಲ್ಸಿಯಸ್‍ನ ಗರಿಷ್ಠ ತಾಪಮಾನದಲ್ಲಿ ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಸಂಚಾರಿ ಪೊಲೀಸರಿಗೆ ತಣ್ಣನೆಯ ಅನುಭವ ನೀಡಲಿದೆ. ಈ ಹೆಲ್ಮೆಟ್‍ಗಳನ್ನು ವಿವಿಧ ವಿಶೇಷವಾಗಿ ತಯಾರಿಸಲಾಗಿದೆ.

ಸೂರ್ಯನ ಬೆಳಕಿನಿಂದ ಕಣ್ಣುಗಳನ್ನು ರಕ್ಷಿಸಲು ಮುಖವಾಡ ಮತ್ತು ಚಾಜಿರ್ಂಗ್ ಪಾಯಿಂಟ್‍ನ್ನು ಇದು ಹೊಂದಿದೆ. ಪೂರ್ಣ ಚಾರ್ಜ್‍ನಲ್ಲಿ, ಈ ಹೆಲ್ಮೆಟ್‍ಗಳು 8 ಗಂಟೆಗಳವರೆಗೆ ಕೆಲಸ ಮಾಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಪೊಲೀಸ್ ಇಲಾಖೆಯ ಈ ನಡೆಯನ್ನು ಸಾರ್ವಜನಿಕರು ಪ್ರಶಂಸಿದ್ದಾರೆ. ಬಳಕೆದಾರರು ನಮ್ಮ ರಾಜ್ಯದಲ್ಲೂ ಪೊಲೀಸ್ ಇಲಾಖೆಯು ಇದೇ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಈ ಬಗ್ಗೆ ಟ್ರಾಫಿಕ್ ವಿಭಾಗದ ಡಿಸಿಪಿ ಆರತಿ ಸಿಂಗ್  ಪ್ರತಿಕ್ರಿಯಿಸಿ, ನಗರದ ಆರು ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ಪೊಲೀಸರಿಗೆ ಪ್ರಾಯೋಗಿಕವಾಗಿ ಹೆಲ್ಮೆಟ್‍ಗಳನ್ನು ನೀಡಲಾಗಿದ್ದು, ಅದರ ಫಲಿತಾಂಶವೂ ಸಾಕಷ್ಟು ಯಶಸ್ವಿಯಾಗಿದೆ. ಶೀಘ್ರದಲ್ಲೇ ಈ ಎಸಿ ಹೆಲ್ಮೆಟ್ ನಗರದ ಇತರ ಭಾಗಗಳಲ್ಲಿ ನಿಯೋಜಿಸಲಾದ ಟ್ರಾಫಿಕ್ ಪೊಲೀಸರಿಗೂ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago