News Karnataka Kannada
Monday, May 06 2024
ಗುಜರಾತ್

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ, 61 ಕೋಟಿ ಮೌಲ್ಯದ ಡ್ರಗ್ಸ್ ವಶ

assembly elections: Drugs worth Rs 61 crore seized
Photo Credit : Pixabay

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ನವೆಂಬರ್ 3 ರಂದು ಅಧಿಸೂಚನೆ ಹೊರಡಿಸಿದ ನಂತರ ಚುನಾವಣಾ ಆಯೋಗದ ಸ್ಥಿರ ಕಣ್ಗಾವಲು ತಂಡಗಳು ಮತ್ತು ಸ್ಥಳೀಯ ಪೊಲೀಸರು 61 ಕೋಟಿ 57,05,184 ರೂ.ಗಳಿಗೂ ಹೆಚ್ಚು ಮೌಲ್ಯದ 817 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ 29 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆಯಡಿ 51 ಅಕ್ರಮ ಶಸ್ತ್ರಾಸ್ತ್ರಗಳು ಮತ್ತು 274 ಅಕ್ರಮ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಪಿ.ಭಾರತಿ  ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ 55,640 ಶಸ್ತ್ರಾಸ್ತ್ರ ಪರವಾನಗಿದಾರರಿದ್ದು, ಅವರಲ್ಲಿ 54,373 ಮಂದಿ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೇಂದ್ರ ಕಚೇರಿಯಲ್ಲಿ ಠೇವಣಿ ಇಟ್ಟಿದ್ದಾರೆ.

ಪೊಲೀಸರು 17,789 ಜನರ ವಿರುದ್ಧ ನಿಷೇಧ ಕಾಯ್ದೆಯಡಿ 1,704 ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು 9 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಪ್ರಕರಣಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಗಳು 2,02,42,490 ರೂ ನಗದು ಮತ್ತು 10 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು