Categories: ಗುಜರಾತ್

ಗುಜರಾತ್‌: ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಸಾವು

ಗುಜರಾತ್‌:  ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದು, ಇನ್ನೂ 40 ಜನರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನುಷ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಗುಜರಾತ್‌ನ ಬೋತದ್ ಜಿಲ್ಲೆಯಲ್ಲಿ ಸ್ಥಳೀಯರು ಭಾನುವಾರ ಕಲಬೆರಕೆ ಮದ್ಯ ಸೇವನೆ ಮಾಡಿದ್ದಾರೆ.  ಸೋಮವಾರ ಬೆಳಗಿನ ವೇಳೆಗೆ ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾದ್ದರಿಂದ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಭಾವನಗರ, ಬೋತದ್ ಮತ್ತು ಬರ್ವಾಲಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ವಿವಿಧ ಊರುಗಳಲ್ಲಿ ಏಕಕಾಲಕ್ಕೆ ಅಪಾರ ಸಂಖ್ಯೆಯ ಜನ ಸ್ಥಳೀಯ ಆಸ್ಪತ್ರೆಗೆ ದಾಖಲಾದಾಗ ವಿಷಯ ಬೆಳಕಿಗೆ ಬಂದಿದೆ. ಎಲ್ಲರೂ ಒಂದೇ ರೀತಿಯ ಮದ್ಯ ಸೇವಿಸಿದ್ದರಿಂದ ಈ ಪರಿಸ್ಥಿತಿ ಉಂಟಾಗಿದೆ ಎಂಬುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಪೊಲೀಸರ ಅಂದಾಜಿನ ಪ್ರಕಾರ ಸ್ಥಳೀಯ ವ್ಯಾಪಾರಿಯೊಬ್ಬರು ಈ ಮದ್ಯವನ್ನು ಅಕ್ರಮವಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದು, ಸಂತ್ರಸ್ತರು  ಸೇವಿಸಿದ ಆಲ್ಕೋಹಾಲ್‌ನಲ್ಲಿ ಹೆಚ್ಚಿನ ಮೀಥೈಲ್ ಅಂಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮದ್ಯ ಸೇವಿಸಿ ಇದುವರೆಗೆ ಸುಮಾರು 25 ಮಂದಿ ಸಾವನ್ನಪ್ಪಿದ್ದು, 40 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ  ವರದಿಯಾಗಿದೆ. ಕಲಬೆರಕೆ ಮದ್ಯ ತಯಾರಿಸುತ್ತಿದ್ದ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಅಧಿಕಾರಿಗಳು ವಿಶೇಷ ಪೊಲೀಸ್ ತಂಡವನ್ನು ರಚಿಸಿದ್ದಾರೆ.

Sneha Gowda

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

24 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

41 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago