News Karnataka Kannada
Monday, April 29 2024
ಗುಜರಾತ್

ಸ್ಟಾಪ್ ಕ್ಲಾಕ್ ಹೊಸ ನಿಯಮ ಜಾರಿಗೆ ತಂದ ಐಸಿಸಿ

Cricekt
Photo Credit : News Kannada

ಅಹಮದಾಬಾದ್: ಸ್ಟಾಪ್ ಕ್ಲಾಕ್ ಎಂಬ ಹೊಸ ನಿಯಮವನ್ನು ಐಸಿಸಿ ಜಾರಿಗೆ ತಂದಿದೆ. ಅಹಮದಾಬಾದ್​ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ನಿಯಮಗಳನ್ನು ತರಲಾಗುವುದೆಂದು ಮತ್ತು ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಬಳಸಲಾಗುವುದು ಎಂದು ತಿಳಿಸಿದೆ. ಆಟದ ವೇಗವನ್ನು ಹೆಚ್ಚಿಸಲು ಈ ನಿಯಮವನ್ನು ತರಲಾಗಿದ್ದು, ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಸಲುವಾಗಿ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲಾಗುತ್ತಿದೆ. ಬೌಲಿಂಗ್ ತಂಡವು ಹಿಂದಿನ ಓವರ್ ಮುಗಿದ ಒಂದು ನಿಮಿಷಗಳ ಒಳಗೆ ಮುಂದಿನ ಓವರ್ ಅನ್ನು ಬೌಲ್ ಮಾಡಲು ಸಿದ್ಧವಾಗಿರಬೇಕು. ಒಂದು ವೇಳೆ ಬೌಲಿಂಗ್ ತಂಡ ಸಿದ್ಧವಾಗಿರದೇ ಇದ್ದರೆ ಹಾಗೂ ಈ ರೀತಿಯ ಘಟನೆ ಇನ್ನಿಂಗ್ಸ್‌ನಲ್ಲಿ ಮೂರನೇ ಬಾರಿಗೆ ನಡೆದರೆ ಬೌಲಿಂಗ್ ತಂಡಕ್ಕೆ 5 ರನ್‌ಗಳ ದಂಡವನ್ನು ವಿಧಿಸಲಾಗುತ್ತದೆ ಎಂದು ಐಸಿಸಿ ಹೇಳಿದೆ.

ಓವರ್‌ಗಳ ನಡುವೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಸ್ಟಾಪ್ ಕ್ಲಾಕ್ ನಿಯಮವನ್ನು ತರಲಾಗಿದೆ. ಸ್ಟಾಪ್ ಕ್ಲಾಕ್ ನಿಯಮವನ್ನು ಪ್ರಾಯೋಗಿಕವಾಗಿ ಡಿ.2023 ರಿಂದ ಏ.2024 ರವರೆಗೆ ಜಾರಿಗೆ ತರಲಾಗುವುದು. ಇನ್ನು ಡಿ. 2023 ರಿಂದ ಏ. 2024 ರವರೆಗೆ ಪುರುಷರ ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಸ್ಟಾಪ್ ಕ್ಲಾಕ್ ನಿಯಮವನ್ನು ಪರಿಚಯಿಸಲು ಸಿಇಸಿ ಸಮ್ಮತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು