ಸೂರತ್: ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣ ಕುರಿತು ಗುರುವಾರ ತೀರ್ಪು ನೀಡಿದ ಗುಜರಾತ್ ಹೈಕೋರ್ಟ್ ರಾಹುಲ್ ತಪ್ಪಿತಸ್ಥರು ಎಂದಿದೆ. ಈ ಸಂಬಂಧ 2 ವರ್ಷ ಜೈಲು ಅಥವಾ ದಂಡ ಪಾವತಿಯ ಶಿಕ್ಷೆ ವಿಧಿಸಿದೆ.
ಮೋದಿ ಎಂಬ ಉಪನಾಮದ ಬಗ್ಗೆ ಅವಮಾನಕಾರಿಯಾಇ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
2019ರ ಲೋಕಸಭೆ ಚುನಾವಣೆಗಾಗಿ ಕೋಲಾರದಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ, ಕಳ್ಳರ ಹೆಸರಿನ ಮುಂದೆ ಸಾಮಾನ್ಯವಾಗಿ ಮೋದಿ ಎಂಬ ಉಪನಾಮ ಕಂಡುಬರುತ್ತದೆ ಎಂದು ಹೇಳಿದ್ದರು. ಹೇಳಿಕೆಗೆ ಸಂಬಂಧಿಸಿ ಅಂದಿನ ಗುಜರಾತ್ ಸಚಿವ ಪೂರ್ಣೇಶ್ ಮೋದಿ ಎಂಬುವರು ಪ್ರಕರಣ ದಾಖಲಿಸಿದ್ದರು.