News Karnataka Kannada
Saturday, May 04 2024
ಗುಜರಾತ್

ಆಯುಷ್ಮಾನ್‌ ಭಾರತ ಯೋಜನೆಯನ್ನು ಹಾಡಿ ಹೊಗಳಿದ ಟೆಡ್ರೊಸ್

Tedros praises Ayushman Bharat scheme
Photo Credit : Twitter

ಗಾಂಧಿನಗರ: ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಭಾರತದ ಆಯುಷ್ಮಾನ್‌ ಯೋಜನೆಯನ್ನು ಶ್ಲಾಘಿಸಿದ್ದಾರೆ. ಗುಜರಾತಿನ ಗಾಂಧಿನಗರದಲ್ಲಿ ನಡೆಯುತ್ತಿರುವ ಜಿ20 ಆರೋಗ್ಯ ಸಚಿವರ ಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಡಾ. ಟೆಡ್ರೊಸ್ ಈ ಹೇಳಿಕೆ ನೀಡಿದ್ದಾರೆ.

ಅಲ್ಲದೆ 20 ಶೃಂಗಸಭೆಯನ್ನು ಆಯೋಜಿಸುವಲ್ಲಿ ಭಾರತದ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ನಾನು ಗಾಂಧಿನಗರದಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಕ್ಕೆ ಭೇಟಿ ನೀಡಿದ್ದು, ಅಲ್ಲಿನ ಆರೋಗ್ಯ ಸೇವೆಗಳಿಂದ ಪ್ರಭಾವಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಗುಜರಾತ್‌ನಲ್ಲಿ ಒದಗಿಸಲಾದ ಟೆಲಿಮೆಡಿಸಿನ್ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ.

ಜಿ20 ಆರೋಗ್ಯ ಸಚಿವರ ಸಭೆಯಲ್ಲಿ ವಿವಿಧ ದೇಶಗಳ 70 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ.

ಜಿ20 ಇಂಡಿಯಾ ಪ್ರೆಸಿಡೆನ್ಸಿ ಅಡಿಯಲ್ಲಿ ಮೂರು ದಿನಗಳ ಜಿ20 ಆರೋಗ್ಯ ಮಂತ್ರಿಗಳ ಸಭೆಯು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು