News Karnataka Kannada
Tuesday, April 23 2024
Cricket
ಗುಜರಾತ್

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಮೂವರು ಸಾವು

Untitled 2 Recovered Recovered Recovered
Photo Credit :

ಅಹಮದಾಬಾದ್: ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂವರು ನಿದ್ರಿಸುತ್ತಿದ್ದ ವೇಳೆ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿತ್ತು.ಪರಿಣಾಮ ಮಹಿಳೆ, ಆಕೆಯ ಪತಿ ಮತ್ತು ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇವರೆಲ್ಲಾ 25ರಿಂದ 30 ವರ್ಷದ ವಯಸ್ಸಿನವರಾಗಿದ್ದಾರೆ ಎಂದು ಹಲ್ವಾಡ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಗುಜರಾತ್ ನ 91 ತಾಲೂಕುಗಳಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿರುವುದಾಗಿ ವರದಿ ಹೇಳಿದೆ.

ಘಟನೆ ಬಗ್ಗೆ ಕೆಲವು ಸ್ಥಳೀಯರು ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ  ಆಸ್ಪತ್ರೆಗೆ ರವಾನಿಸಿರುವುದಾಗಿ ವರದಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು