ಗುಜರಾತ್: ವೇಗವಾಗಿ ಚಲಿಸುತ್ತಿದ್ದ ಕಾರು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಗುಜರಾತ್ನ ಖೇಡಾ ಜಿಲ್ಲೆಯ ನಾಡಿಯಾಡ್ ನಗರದ ಬಳಿ ಅಹಮದಾಬಾದ್-ವಡೋದರ ಎಕ್ಸ್ಪ್ರೆಸ್ ದಾರಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಡೋದರದಿಂದ ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ. 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಇನನು ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಎಂದು ನಾಡಿಯಾಡ್ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.