News Karnataka Kannada
Monday, April 29 2024
ಗುಜರಾತ್

ಗುಜರಾತ್​​ನಲ್ಲಿ ಭಾರೀ ಮಳೆ: ಸಿಡಿಲು ಬಡಿದು 20 ಜನ ಸಾವು

 Unseasonal Rains
Photo Credit : News Kannada

ಗಾಂಧಿನಗರ: ಗುಜರಾತ್​​ನಲ್ಲಿ ಭಾರೀ ಮಳೆ ಉಂಟಾಗಿದ್ದು, ಇಂದು ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕಳೆದ ದಿನ (ನ.26) ರಾಜ್ಯದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದ್ದರಿಂದ ಸಿಡಿಲು ಬಡಿದು ಎಂಟು ಜನ ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ 22 ವರ್ಷದ ಯುವಕ ಬೈಕ್​​ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ ಬಿದ್ದು 29 ವರ್ಷದ ಯುವಕ ಮೃತಪಟ್ಟಿದ್ದಾನೆ. ಇದರ ಜತೆಗೆ ತಾಪಿ ಜಿಲ್ಲೆಯಲ್ಲಿ ಇಬ್ಬರು ಮತ್ತು ಸಬರ್ಕಾಂತ, ಅಹಮದಾಬಾದ್, ಮೆಹ್ಸಾನಾ ಮತ್ತು ದಾಹೋದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗುಜರಾತ್‌ನ 251 ತಾಲೂಕುಗಳಲ್ಲಿ 220 ತಾಲೂಕುಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಗಳಲ್ಲಿ 50 ಮಿಮೀ ವರೆಗೆ ಮಳೆಯಾಗಿದೆ. ಇನ್ನು ಈ ಅಕಾಲಿಕ ಮಳೆ ಈಶಾನ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತ ಉಂಟಾದ ಪರಿಣಾಮದಿಂದ ಇದಕ್ಕೆ ಕಾರಣ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು