News Karnataka Kannada
Wednesday, April 24 2024
Cricket
ಹರ್ಯಾಣ

ಫರಿದಾಬಾದ್: ಒಂದೂವರೆ ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿದ 40 ವರ್ಷದ ವ್ಯಕ್ತಿ ಬಂಧನ

Photo Credit : IANS

ಫರಿದಾಬಾದ್ : ತನ್ನ ನೆರೆಮನೆಯ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮಗುವಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಉತ್ತರ ಪ್ರದೇಶದ ನಿವಾಸಿ ದೇಶರಾಜ್ ಎಂದು ಗುರುತಿಸಲಾಗಿದೆ. ಬಲ್ಲಬ್ಗಢ್‌ನಲ್ಲಿರುವ ಶಾಹಪುರ್ ಗ್ರಾಮದಲ್ಲಿ ಬಾಲಕಿಯ ಪಕ್ಕದ ಮನೆಯಲ್ಲಿಯೇ ಆರೋಪಿ ವಾಸಿಸುತ್ತಿದ್ದ. ಬಾಲಕಿಯ ತಾಯಿ ಮತ್ತೊಂದು ಮನೆಗೆ ಕೆಲಸಕ್ಕೆ ತೆರಳುತ್ತಿದ್ದರು. ತಂದೆ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದರು.

ಸಂತ್ರಸ್ತೆಯ ತಾಯಿ ಪ್ರಕಾರ, ಕೆಲಸದಿಂದ ತಾಯಿ ಮನೆಗೆ ಹಿಂದಿರುಗಿದಾಗ ಆರೋಪಿಯು ಬಾಲಕಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಕೂಡಲೇ ಸಹಾಯಕ್ಕಾಗಿ ನೆರೆಹೊರೆಯವರನ್ನು ಕೂಗಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು