News Karnataka Kannada
Tuesday, April 23 2024
Cricket
ಹರ್ಯಾಣ

ಹರಿಯಾಣ ಕೆಮಿಕಲ್ ಪ್ಲಾಂಟ್‌ನಲ್ಲಿ ಭಾರೀ ಅಗ್ನಿ ಅವಘಡ

ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಪ್ರಾಣಕಳೆದುಕೊಂಡಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Photo Credit : IANS

ಹರಿಯಾಣ, ಏ. 17 : ಹರಿಯಾಣದ ಸೋನಿಪತ್‌ನ ಕುಂಡ್ಲಿ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾನುವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹರಿಯಾಣದ ವಿಶೇಷ ಕೋರಿಕೆಯ ಮೇರೆಗೆ, ದೆಹಲಿ ಅಗ್ನಿಶಾಮಕ ಸೇವೆಯು ತನ್ನ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಕಳುಹಿಸಲಾಗಿದೆ.

ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುವುದು ಇನ್ನೂ ಕೂಡಾ ತಿಳಿದು ಬಂದಿಲ್ಲ. ಪ್ರಸ್ತುತ ರಾಸಾಯನಿಕ ಕಾರ್ಖಾನೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಎಎನ್‌ಐ 12 ಸೆಕೆಂಡ್‌ಗಳ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಕಾರ್ಖಾನೆಯಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈನ ನಲಸೋಪರದ ಪಾಂಡೆ ನಗರ ಪ್ರದೇಶದ ಗೋಡೌನ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮುಂಬೈ ಅಗ್ನಿಶಾಮಕ ದಳದ ಪ್ರಕಾರ, ಮಾರ್ಚ್ 29 ರ ಸಂಜೆ ಮುಂಬಾದೇವಿ ದೇವಸ್ಥಾನದ ಬಳಿಯ ಪಟೇಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐದು ಜನರು ಗಾಯಗೊಂಡಿದ್ದರು. ಇನ್ನು ಭಾನುವಾರ ಗ್ರೀನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಹೊಸದಿಲ್ಲಿಯ ಉಪಹಾರ್ ಸಿನಿಮಾ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಿಯಂತ್ರಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಸಿನಿಮಾ ಹಾಲ್‌ನಲ್ಲಿದ್ದ ಪೀಠೋಪಕರಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು