ಹರಿಯಾಣ: ಕಾರು-ಟ್ರಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಹಲಿ-ಜೈಪುರ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಭಾನುರಾಮ್ (35), ಮಹೇಂದ್ರ (33), ಆಶಿಶ್ (15), ಸುಗ್ಮಾ ದೇವಿ (35), ಮತ್ತು ಭೋರಿ ದೇವಿ (95) ಎಂದು ಗುರುತಿಸಲಾಗಿದೆ. ಇನ್ನೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತ್ರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಕಾರಿನಲ್ಲಿ ಸುಮಾರು 17 ಮಂದಿ ಇದ್ದರು ಎನ್ನಲಾಗಿದೆ. ಇವರು ಜೈಪುರ ಜಿಲ್ಲೆಯಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗಿ ಹರಿದ್ವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.