News Karnataka Kannada
Sunday, May 12 2024
ಹರ್ಯಾಣ

ಕೊರೋನಾ ಲಸಿಕೆ ಪಡೆಯದ 15-18 ವರ್ಷದ ಮಕ್ಕಳಿಗೆ ಶಾಲೆಯೊಳಗೆ ಪ್ರವೇಶವಿಲ್ಲ: ಹರಿಯಾಣ ಸರ್ಕಾರ

Covovax vaccine for children aged 7-12 years
Photo Credit :

ಕೊರೋನಾ ಲಸಿಕೆ ಪಡೆಯದ 15-18 ವರ್ಷದ ಮಕ್ಕಳಿಗೆ ಶಾಲೆಯೊಳಗೆ ಪ್ರವೇಶವಿಲ್ಲ ಎಂದು ಹರಿಯಾಣ ಸರ್ಕಾರ ತಿಳಿಸಿದೆ. ಕಳೆದ ಕೆಲದಿನಗಳಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವುದರಿಂದ ಶಾಲೆಗಳನ್ನು ಮುಚ್ಚಲಾಗಿದೆ.

ಜ.3ರಿಂದ ಶಾಲಾ ಮಕ್ಕಳಿಗೆ ಲಸಿಕಾಭಿಯಾನ ಆರಂಭಗೊಂಡಿದ್ದು, ಎಲ್ಲ ಮಕ್ಕಳು ಲಸಿಕೆ ಪಡೆಯುವಂತೆ ಸರ್ಕಾರ ಮನವಿ ಮಾಡಿದೆ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳದ ಮಕ್ಕಳಿಗೆ ಶಾಲೆಗಳು ಮತ್ತೆ ತೆರೆದಾಗ ಶಾಲೆಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಶೀಘ್ರ ಲಸಿಕೆ ಹಾಕಿಸಬೇಕು ಎಂದು ತಿಳಿಸಿದ್ದಾರೆ. ಹರಿಯಾಣದಲ್ಲಿ 15-18 ವರ್ಷ ವಯಸ್ಸಿನ 15 ಲಕ್ಷ ಸೋಂಕಿತರು ಲಸಿಕೆ ಪಡೆಯಲು ಅರ್ಹರಿದ್ದಾರೆ. ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು