Categories: ಹರ್ಯಾಣ

ಪೋಷಕರ ಸಣ್ಣ ಕನಸನ್ನು ನನಸು ಮಾಡಿದ ನೀರಜ್ ಚೋಪ್ರಾ

  ಹರ್ಯಾಣ : ಟೋಕಿಯೊ ಒಲಿಂಪಿಕ್ಸ್ 2021ರ ಚಿನ್ನದ ಪದಕ ವಿಜೇತ ಅಥ್ಲೆಟಿಕ್ ನೀರಜ್ ಚೋಪ್ರಾ ತಮ್ಮ ಪೋಷಕರ ಸಣ್ಣ ಕನಸನ್ನು ನನಸು ಮಾಡಿದ್ದಾರೆ. ಅವರಿಗಿದ್ದ ಕನಸು ಏನೆಂದರೆ ವಿಮಾನದಲ್ಲಿ ಒಮ್ಮೆ ಕುಳಿತುಕೊಂಡು ಹಾರಾಟ ನಡೆಸಬೇಕೆಂದು.

ಈಟಿ ಎಸೆತದಲ್ಲಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ 23 ವರ್ಷದ ಮಗ ನೀರಜ್ ಚೋಪ್ರಾ ಪೋಷಕರ ಕನಸನ್ನು ಇಂದು ಈಡೇರಿಸಿದ್ದಾರೆ. ತಂದೆ-ತಾಯಿಯ ಪುಟ್ಟ ಆಸೆಯೊಂದನ್ನು ಇಂದು ತೀರಿಸಿ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪೋಷಕರೊಂದಿಗೆ ವಿಮಾನದೊಳಗೆ ಕಾಲಿಡುವ ಮತ್ತು ವಿಮಾನದೊಳಗೆ ಕುಳಿತುಕೊಂಡ ಮೇಲೆ ತೆಗೆದುಕೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವರ ಈ ನಡೆಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ಹರಿಸುತ್ತಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ಮುಗಿಸಿಕೊಂಡು ಬಂದ ನಂತರ ಸತತ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಮತ್ತು ಅನಾರೋಗ್ಯಕ್ಕೀಡಾದ ಕಾರಣ ನೀರಜ್ ಚೋಪ್ರಾ ಸದ್ಯಕ್ಕೆ ಯಾವುದೇ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅವರು ಬೇಸರವನ್ನು ಕೂಡ ವ್ಯಕ್ತಪಡಿಸಿದ್ದರು. ಈ ವರ್ಷ ಡಿಸೆಂಬರ್ ವರೆಗೆ ಯಾವುದೇ ಚ್ಯಾಂಪಿಯನ್ ಷಿಪ್ ಗೇಮ್ ಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಮುಂದಿನ ವರ್ಷ ಹೊಸ ಉತ್ಸಾಹದೊಂದಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿಕೊಂಡಿದ್ದಾರೆ.

Sneha Gowda

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

4 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

16 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

25 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

45 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

45 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago