ಫರಿದಾಬಾದ್ : ತನ್ನ ನೆರೆಮನೆಯ ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಮಗುವಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಉತ್ತರ ಪ್ರದೇಶದ ನಿವಾಸಿ ದೇಶರಾಜ್ ಎಂದು ಗುರುತಿಸಲಾಗಿದೆ. ಬಲ್ಲಬ್ಗಢ್ನಲ್ಲಿರುವ ಶಾಹಪುರ್ ಗ್ರಾಮದಲ್ಲಿ ಬಾಲಕಿಯ ಪಕ್ಕದ ಮನೆಯಲ್ಲಿಯೇ ಆರೋಪಿ ವಾಸಿಸುತ್ತಿದ್ದ. ಬಾಲಕಿಯ ತಾಯಿ ಮತ್ತೊಂದು ಮನೆಗೆ ಕೆಲಸಕ್ಕೆ ತೆರಳುತ್ತಿದ್ದರು. ತಂದೆ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದರು.
ಸಂತ್ರಸ್ತೆಯ ತಾಯಿ ಪ್ರಕಾರ, ಕೆಲಸದಿಂದ ತಾಯಿ ಮನೆಗೆ ಹಿಂದಿರುಗಿದಾಗ ಆರೋಪಿಯು ಬಾಲಕಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಕೂಡಲೇ ಸಹಾಯಕ್ಕಾಗಿ ನೆರೆಹೊರೆಯವರನ್ನು ಕೂಗಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ