Categories: ಹರ್ಯಾಣ

ರಂಜಿತ್ ಸಿಂಗ್ ಕೊಲೆ ಪ್ರಕರಣ : ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ಹರ್ಯಾಣ :   ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಗುರ್ಮೀತ್ ರಾಮ್ ರಹೀಮ್ ಗೆ 31 ಲಕ್ಷ ರೂ. ಮತ್ತು ಇತರ ನಾಲ್ಕು ಆರೋಪಿಗಳಿಗೆ 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಹರಿಯಾಣದ ಸೀರ್ಸಾದಲ್ಲಿ ಪ್ರಧಾನ ಆಶ್ರಮ ಹೊಂದಿರುವ ಡೇರಾ ಸಚ್ಚಾ ಸೌದಾ ಪಂಥದ ಅನುಯಾಯಿಯೂ ಆಗಿದ್ದ, ಮಾಜಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್​​ರನ್ನು 2002ನೇ ಇಸವಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಿ ಐಪಿಸಿ ಸೆಕ್ಷನ್​ 302 ಮತ್ತು 120 ಬಿ ಅಡಿ ಆರೋಪಪಟ್ಟಿ ಸಲ್ಲಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ಅಕ್ಟೋಬರ್ 8 ರಂದು ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ಆರೋಪಿಗಳಾದ ಜಸ್ಬೀರ್, ಸಬ್ದಿಲ್, ಅವತಾರ್, ಕ್ರಿಶನ್ ಲಾಲ್ ಮತ್ತು ದಿ. ಇಂದರ್ ಸೇನ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು. ಇಂದು ಐವರೂ ಆರೋಪಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಎಂದು ವರದಿಗಳು ತಿಳಿಸಿವೆ

Sneha Gowda

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

9 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

13 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

20 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

32 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

38 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

52 mins ago