ಫತೇಹಾಬಾದ್( ಹರ್ಯಾಣ) : ಹರ್ಯಾಣ ಸರ್ಕಾರ ಆರಂಭಿಸಿರುವ ಡಯಲ್ ನಂಬರ್ 112 ಸೇವೆ ಈಗ ಜನರಿಗೆ ವರದಾನವಾಗಿದೆ. ಹೌದು, 11 ವರ್ಷದ ಬಾಲಕನೋರ್ವ ಈ ನಂಬರ್ಗೆ ಕಾಲ್ ಮಾಡಿ ನನ್ನ ತಾಯಿ ವಿಷ ಸೇವಿಸಿದ್ದಾರೆ ಎಂದು ಹೇಳಿದ್ದಾನೆ. ವಿಷಯ ತಿಳಿದ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆ ಬೆಳಕಿಗೆ ಬಂದಿದೆ.
ತೇಹಾಬಾದ್ನ ದರಿಯಾಪುರ ಗ್ರಾಮದ ಬಳಿ ಇರುವ ಧನಿ ಮಹತಾಬ್ನಲ್ಲಿ 11 ವರ್ಷದ ಬಾಲಕನೊಬ್ಬ 112 ಗೆ ಕರೆ ಮಾಡಿ ತನ್ನ ತಾಯಿ ವಿಷ ಸೇವಿಸಿದ್ದಾಳೆ. ಆಕೆಯನ್ನು ಕಾಪಾಡಿ ಎಂದು ಕೇಳಿಕೊಂಡಿದ್ದಾನೆ.
ವಿಷಯ ತಿಳಿದ ಡಯಲ್ 112 ಉದ್ಯೋಗಿ ಮಖನ್ ಸಿಂಗ್ ತನ್ನ ತಂಡದೊಂದಿಗೆ ತಕ್ಷಣವೇ ಸ್ಥಳಕ್ಕೆ ಆಗಮಿಸಿ ನರಳುತ್ತಿರುವ ಮಹಿಳೆಯನ್ನು ಎತ್ತಿಕೊಂಡು ಕಾರಿನಲ್ಲಿ ಸಿವಿಲ್ ಆಸ್ಪತ್ರೆಗೆ ಸೇರಿಸಿದರು. ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಮಹಿಳೆಯನ್ನು ಸೋಮಾ ದೇವಿ ಎಂದು ಗುರುತಿಸಲಾಗಿದೆ. ಈ ವಿಷಯವನ್ನು ಮಹಿಳೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮಹಿಳೆಯು ವಿಷ ಸೇವಿಸಲು ಲಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…