ಚಂಡಿಗಢ: ಆನ್ಲೈನ್ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಹರಿಯಾಣ ಸರ್ಕಾರ 3 ಲಕ್ಷ ಟ್ಯಾಬ್ಲೆಟ್ಗಳನ್ನು ವಿತರಿಸುವ ಇ-ಅಧಿಗಮ್ ಯೋಜನೆಗೆ ಚಾಲನೆ ನೀಡಿದೆ.
ಈ ಯೋಜನೆಯಲ್ಲಿ 3 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ನೀಡಲಾಗುವುದು. 10 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಇ ಯೋಜನೆ ವ್ಯಾಪ್ತಿಗೆ ಬರಲಿದ್ದು, ಸಾಫ್ಟ್ವೇರ್ ಕಲಿಕೆಗೆ ಹೆಚ್ಚು ಅನುಕೂಲವಾಗಲು ಈ ನಿರ್ಧಾರ ಕೈಗೊಂಡಿದೆ ಎಂದು ಸರ್ಕಾರ ತಿಳಿಸಿದೆ.
ಇನ್ನೂ 5 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಗುರಿ ಹೊಂದಿದ್ದು, 9ನೇ ತರಗತಿ ವಿದ್ಯಾರ್ಥಿಗಳಿಗೂ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ. ಕರೊನಾ ಸಮಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ಆಗಿದ್ದ ತೊಂದರೆಯನ್ನು ನಿವಾರಿಸಲು ಸರ್ಕಾರವೇ ಈ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.