ಹರ್ಯಾಣ: ಇಂದು ಮುಂಜಾನೆ 4ಗಂಟೆಗೆ ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಈ ಕುರಿತು ಎನ್ಸಿಎಸ್ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದಕ್ಕೂ ಮುನ್ನ ನ. 20 ರಂದು ಮಹಾರಾಷ್ಟ್ರದ ಹಿಂಗೋಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ಎನ್ಸಿಎಸ್ ತಿಳಿಸಿದೆ.