ಗುರುಗ್ರಾಮ: ನಾಲ್ವರು ಜಾನುವಾರು ಕಳ್ಳಸಾಗಣೆದಾರರ ಬಂಧನದೊಂದಿಗೆ ಗುರುಗ್ರಾಮದ ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ಪ್ರೆಸ್ವೇಯಲ್ಲಿ ಗುರುವಾರ ಮುಂಜಾನೆ 29 ಹಸುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹಸುಗಳನ್ನು ಸೋನಿಪತ್ ನಿಂದ ನುಹ್ ಗೆ ಕರೆದೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಸಾಗಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಗೋರಕ್ಷಕರ ಗುಂಪೊಂದು ನೀಡಿದ ಸುಳಿವಿನ ಮೇರೆಗೆ ಒಂದು ಟ್ರಕ್ ಮತ್ತು ಒಂದು ಪಿಕಪ್ ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಹಸುಗಳನ್ನು ವಾಹನಗಳ ಒಳಗೆ ಹಗ್ಗಗಳಿಂದ ಕಟ್ಟಲಾಗಿತ್ತು. “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಲಾಸ್ಪುರ ಪೊಲೀಸ್ ಠಾಣೆಯಲ್ಲಿ ಹರಿಯಾಣ ಗೌವಂಶ್ ಸಂರಕ್ಷಣಾ ಮತ್ತು ಗೋಸಂವರ್ಧನ್ ಕಾಯ್ದೆ, 2015 ರ ಸೆಕ್ಷನ್ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಅವರ ವಿರುದ್ಧ ಆರೋಪ ಹೊರಿಸಲಾಗಿದೆ.