ಹರ್ಯಾಣ

ಗುರುಗ್ರಾಮ: ಟವರ್ ಕ್ರೇನ್ ನಿಂದ ಬಿದ್ದು ನಾಲ್ವರು ಸಾವು, ಒಬ್ಬರಿಗೆ ಗಾಯ

ಗುರುಗ್ರಾಮ: ಗುರುಗ್ರಾಮದ ಸೆಕ್ಟರ್ -77 ರಲ್ಲಿನ ನಿರ್ಮಾಣ ಸ್ಥಳದಲ್ಲಿ ಮಂಗಳವಾರ ಸಂಜೆ ಟವರ್ ಕ್ರೇನ್ ಅನ್ನು 17 ನೇ ಮಹಡಿಗೆ ಅಳವಡಿಸುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಕ್ಟರ್ -77 ರ ಎಮಾರ್ ಪ್ಲಾಮ್ ಹಿಲ್ಸ್ನ ನಿರ್ಮಾಣ ಹಂತದ ಸ್ಥಳದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮೃತಪಟ್ಟ ಐವರಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಬಿಹಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.

“ಸಂತ್ರಸ್ತರು 17 ನೇ ಮಹಡಿಯೊಂದಿಗೆ ವಸತಿ ಯೋಜನೆಯ ಮೇಲೆ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸುವ ಟವರ್ ಕ್ರೇನ್ ಅನ್ನು ಫಿಕ್ಸ್ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.  17 ನೇ ಮಹಡಿಯಿಂದ ಬಿದ್ದ ಎಲ್ಲಾ ಐದು ಮಂದಿಯಲ್ಲಿ ಒಬ್ಬರು 12 ನೇ ಮಹಡಿಯ ಸುರಕ್ಷತಾ ಸಲಕರಣೆಗಳ ಮೇಲೆ ಸಿಲುಕಿಕೊಂಡಿದ್ದಾರೆ, ಅವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಉಳಿದವರು ಸಾವನ್ನಪ್ಪಿದ್ದಾರೆ ಎಂದು ಮನೇಸರ್ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸುರೇಶ್ ಕುಮಾರ್ ತಿಳಿಸಿದ್ದಾರೆ.

“ಡ್ಯೂಟಿ ಮ್ಯಾಜಿಸ್ಟ್ರೇಟ್ ಮತ್ತು ಅಪರಾಧ ತಂಡವು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದ್ದು, ವಿವರವಾದ ತನಿಖೆಯ ನಂತರ, ನಿಗದಿತ ಕಾನೂನಿನ ಪ್ರಕಾರ ಯೋಜನೆಯ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು” ಎಂದು ಕುಮಾರ್ ಹೇಳಿದರು.

ಮೃತರ ದೇಹಗಳನ್ನು ಸಿವಿಲ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಪೊಲೀಸರ ಪ್ರಕಾರ ಯೋಜನೆಯ ಗುತ್ತಿಗೆಯನ್ನು ಜೆಜೆಆರ್ಎಸ್ ಗುತ್ತಿಗೆದಾರನಿಗೆ ನೀಡಲಾಗಿದೆ.

Ashika S

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

7 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

8 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

8 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

8 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

9 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

9 hours ago