ಚಂಡೀಗಢ: ಹರ್ಯಾಣದ ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ್ ಸೈನಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ನಾಯಕರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. 2019 ರಿಂದ ರಾಜ್ಯವನ್ನು ಆಳಿದ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಜನನಾಯಕ್ ಜನತಾ ಪಕ್ಷ (ಬಿಜೆಪಿ-ಜೆಜೆಪಿ) ಮೈತ್ರಿಯ ಬಿರುಕುಗಳ ಮಧ್ಯೆ ಮನೋಹರ್ ಲಾಲ್ ಖಟ್ಟರ್ ಕೆಳಗಿಳಿದ ನಂತರ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.
“ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಮತ್ತು ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಧನ್ಯವಾದಗಳನ್ನು ತಿಳಿಸುವೇ” ಎಂದು ನಯಾಬ್ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.