News Karnataka Kannada
Saturday, April 27 2024
ಹರ್ಯಾಣ

ಒಂದಲ್ಲ ಎರಡಲ್ಲ.. 50 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕ ಪ್ರಾಂಶುಪಾಲ

Not one or two. Principal sexually harasses 50 girl students
Photo Credit : IANS

ಚಂಡೀಗಢ: 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿ ಪ್ರಾಂಶುಪಾಲರನ್ನು ಶನಿವಾರ ಬಂಧಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಐವರು ಸದಸ್ಯರ ವಿಶೇಷ ತನಿಖಾ ತಂಡದ ಮುಖ್ಯಸ್ಥ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಭಾಟಿಯಾ ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಬಳಿಕ ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಕೋರುತ್ತೇವೆ ಎಂದು ವಿವರಿಸಿದ್ದಾರೆ.

ಮಹಿಳಾ ಆಯೋಗದಿಂದ ವಿಚಾರಣೆ: ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ 50 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಾಂಶುಪಾಲರ ಮೇಲೆ ಲೈಂಗಿಕ ಕಿರುಕುಳ ಬಗ್ಗೆ ತಿಳಿಸಿದ್ದಾರೆ ಎಂದು ಹರಿಯಾಣ ರಾಜ್ಯ ಮಹಿಳಾ ಆಯೋಗ ತಿಳಿಸಿದೆ ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಪ್ರತಿಕ್ರಿಯೆ ನೀಡಿದ್ದು. “ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರಿಂದ 60 ಲಿಖಿತ ದೂರುಗಳನ್ನು ನಾವು ಸ್ವೀಕರಿಸಿದ್ದೇವೆ ಎಂದು ಹೇಳಿದ್ದಾರೆ. ಆರೋಪಿ ವಿದ್ಯಾರ್ಥಿನಿಯರನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಅವರು ಹೇಳಿದ್ದಾರೆ.

ಈ ಹಿಂದೆಯೇ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ಪ್ರಧಾನಿ ಕಚೇರಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ತಮ್ಮ ಸಂಕಷ್ಟದ ವಿವರ ಕುರಿತು ಪತ್ರ ಬರೆದಿತ್ತು ಎಂದು ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು