News Karnataka Kannada
Monday, May 13 2024
ಹರ್ಯಾಣ

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit : NewsKarnataka

ಚಂಡಿಗಢ: ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು

ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ವಿತ್ತು. ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ.

ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದರು. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳು ಎಂದು ಬಾಲಕಿ ತಾಯಿ ನೋವಿನಿಂದ ಹೇಳಿದ್ದಾರೆ.

 

 

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು