Categories: ಹರ್ಯಾಣ

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಚಂಡೀಗಢ: ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ನಡೆದಿದೆ.

ಹರಿಯಾಣದ ಕರ್ಮ್‌ಗಢ್ ಗ್ರಾಮದ ಗುರ್ನಾಮ್ ಸಿಂಗ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೋಟಾ ಗ್ರಾಮದಿಂದ ತಮ್ಮ ಹಳ್ಳಿಗೆ ರಸ್ತೆ ಮೂಲಕ ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನ ಮೊದಲು ಡಿಕ್ಕಿ ಹೊಡೆದಿದೆ.

ವ್ಯಕ್ತಿಯನ್ನು ಎಳೆದುಕೊಂಡು ಹೋಗುವುದನ್ನು ಹಿಂದೆ ಬರುತ್ತಿದ್ದ ಟ್ರಕ್​ನಲ್ಲಿದ್ದವರು ನೋಡಿದ್ದರು. ಪಿಕಪ್​ ವಾಹನವನ್ನು ನಿಲ್ಲಿಸಬೇಕೆಂದು 2 ಕಿಲೋ ಮೀಟರ್​​​ನಿಂದಲೂ ಚಾಲಕ ಹಾರ್ನ್​ ಮಾಡುತ್ತಾ, ಕೂಗುತ್ತಾ ವೇಗವಾಗಿ ಬಂದಿದ್ದಾರೆ.

ಕೊನೆಗೆ ಟ್ರಕ್​ ಡ್ರೈವರ್​ ಹೇಗೋ ಪಿಕಪ್ ವಾಹನವನ್ನು ನಿಲ್ಲಿಸಿದ್ದಾರೆ. ಬಳಿಕ ವ್ಯಕ್ತಿಯನ್ನು ವಾಹನದ ಕೆಳಗೆ ನೋಡಿದರೆ ದೇಹವೆಲ್ಲ ಪರಚಿಕೊಂಡು ಹೋಗಿ, ರಕ್ತಸಿಕ್ತವಾಗಿತ್ತು. ಇದರಿಂದ ಕೋಪಗೊಂಡ ಟ್ರಕ್​​ನಲ್ಲಿದ್ದವರು ಪಿಕಪ್ ವಾಹನದ ಡ್ರೈವರ್​, ಕ್ಲೀನರ್​ಗೆ ಥಳಿಸಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಮೃತದೇಹವನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನ ಸಂಬಂಧಿಕರ ಹೇಳಿಕೆ ಮೇರೆಗೆ ಡ್ರೈವರ್​ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

16 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

28 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

44 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

3 hours ago