News Karnataka Kannada
Saturday, April 27 2024
ಹರ್ಯಾಣ

ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ವೇಳೆ ಭೀಕರ ಅಪಘಾತ

Haryan
Photo Credit : News Kannada

ಚಂಡೀಗಢ: ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ. ಈ ಘಟನೆಯು ತಡರಾತ್ರಿ ಹರಿಯಾಣದ ಯುಮುನಾ ನಗರದ ಪಿಪ್ಲಿ ಗ್ರಾಮದ ಬಳಿ ಇರುವ ಹೆದ್ದಾರಿಯಲ್ಲಿ ನಡೆದಿದೆ.

ನಗರದ ಪಿಪ್ಲಿ ಗ್ರಾಮದ ಬಳಿ ಇರುವ ಹೈವೇಯಲ್ಲಿ ಎರಡು ಲಾರಿಗಳು ಅತಿ ವೇಗವಾಗಿ ಚಲಿಸುತ್ತಿದ್ದವು. ಈ ವೇಳೆ ಒಂದಕ್ಕೊಂದು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕ್ಷಣಾರ್ಧದಲ್ಲೇ ಎರಡು ಲಾರಿಗೆ ಬೆಂಕಿ ಆವರಿಸಿಕೊಂಡಿದೆ. ಹೀಗಾಗಿ ಅದರೊಳಗಿದ್ದ ಚಾಲಕರಿಬ್ಬರು ಸಜೀವವಾಗಿ ದಹನಗೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಬಳಿಕ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಲಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು