Categories: ದೇಶ

ಪ್ರಧಾನಿ ಮೋದಿಯನ್ನು ಭೇಟಿಯಾದ ಜೆಡಿಎಸ್ ನಾಯಕರ ನಿಯೋಗ

ನವದೆಹಲಿ: ಲೋಕಸಭಾ ಚುನಾವಣೆಯ ಮೈತ್ರಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಜೆಡಿಎಸ್ ನಾಯಕರ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಹೆಚ್‌.ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ, ಹೆಚ್‌.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪ್ರಧಾನಿಯವರನ್ನು ನಾನು, ದೇವೇಗೌಡರು, ರೇವಣ್ಣ ಮತ್ತು ಪ್ರಜ್ವಲ್ ಭೇಟಿ ಮಾಡಿದ್ದೆೇವೆ. ನಂತರ ನಾನು ಮತ್ತು ದೇವೇಗೌಡರು ಪ್ರಧಾನಿಯವರ ಜೊತೆ ಸುದೀರ್ಘ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇವೆೇಗೌಡರ ಬಗ್ಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಪ್ರಧಾನಿಗಳು ಇಟ್ಟ ವಿಶ್ವಾಸ ಇವತ್ತು ಹಾಗೇ ಇದೆ. ಈ ಹಿಂದೆಯೂ ಸಲಹೆ ನೀಡಿದ್ರು. ನೀನು ಒಳ್ಳೆ ಕೆಲಸ ಮಾಡಿದ್ರು ಗೌರವ ಸಿಗುತ್ತಿಲ್ಲ. ನೀನು ಯಾಕೆ ಹೀಗೆ ಈ ರೀತಿಯ ಕೆಲಸ ಮಾಡಿದೆ ಅಂತ ಹೇಳಿದ್ರು ಎಂದು ಹೆಚ್‌ಡಿಕೆ ಹೇಳಿದ್ದಾರೆ.

 

 

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

10 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

28 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

49 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago