News Karnataka Kannada
Thursday, April 18 2024
Cricket
ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತುಹಾಕುವ ಸಮಯ ಬಂದಿದೆ; ಕೇಜ್ರಿವಾಲ್‌

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.
Photo Credit :

ಮಂಡಿ : ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತುಹಾಕುವ ಸಮಯ ಬಂದಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬುಧವಾರ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಆಮ್‌ ಆದ್ಮಿ ಪಕ್ಷವು ಆಯೋಜಿಸಿದ್ದ ರೋಡ್‌ ಶೋದಲ್ಲಿ ಭಾಗವಹಿಸಿ ಕೇಜ್ರಿವಾಲ್ ಮಾತನಾಡಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಅವರು ಈ ವೇಳೆ ಹಾಜರಿದ್ದರು.

‘ಮೊದಲು ನಾವು ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದೆವು. ನಂತರ ಪಂಜಾಬ್‌ನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾನ ಹಾಕಿದೆವು. ಈಗ ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತೊಗೆಯುವ ಸಮಯ ಬಂದಿದೆ’ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು