ಹೊಸ ಕೋವಿಡ್ -19 ರೂಪಾಂತರದ ಒಮಿಕ್ರಾನ್ ಬಗೆಗಿನ ಆತಂಕಕಾರಿ ವರದಿಗಳ ನಡುವೆ, ಹಿಮಾಚಲ ಪ್ರದೇಶವು ವೈರಸ್ ಹರಡುವಿಕೆಯ ವಿರುದ್ಧದ ಹೋರಾಟದಲ್ಲಿ ಹೊಸ ಹೆಗ್ಗುರುತು ಸಾಧಿಸಿದೆ.
ಹೌದು.. ಹಿಮಚಾಲಯ ಪ್ರದೇಶ ಕೊರೋನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ್ದು, ಈ ಮೂಲಕ ಸಂಪೂರ್ಣ ಲಸಿಕೆ ನೀಡದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಗೆ ಪಾತ್ರವಾಗಿದೆ.
ಈ ಬಗ್ಗೆ ಅಲ್ಲಿನ ಸರ್ಕಾರಿ ವಕ್ತಾರರೊಬ್ಬರು ಮಾಹಿತಿ ನೀಡಿದ್ದು, ಇಲ್ಲಿ 53,86,393 ಅರ್ಹ ವಯಸ್ಕರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
“ಆಗಸ್ಟ್ ಅಂತ್ಯದ ಹೊತ್ತಿಗೆ ಶೇ.100ರಷ್ಟು ವಯಸ್ಕರಿಗೆ ಮೊದಲ ಡೋಸ್ ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಮೊದಲ ರಾಜ್ಯ ನಮ್ಮದು. ಈಗ ಡಿಸೆಂಬರ್ 5 ರಂದು, ಎರಡೂ ಡೋಸ್ ಲಸಿಕೆಗಳನ್ನು ಪೂರ್ಣಗೊಳಿಸಿದ ದೇಶದ ಮೊದಲ ರಾಜ್ಯವಾಗುತ್ತೇವೆ” ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.
ಇಂದು ಬಿಲಾಸ್ಪುರದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ (ಏಮ್ಸ್)ನಲ್ಲಿ ಕೋವಿಡ್ 19 ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಇತರ ಗನ್ಯರು ಆಗಮಿಸಲಿದ್ದಾರೆ.