ಶಿಮ್ಲಾ: ಪ್ರಧಾನಮಂತ್ರಿ ನರೇಂದ್ರ ಮೋದಿ 2021 ರ ಇಂದು ಹಿಮಾಚಲ ಪ್ರದೇಶದ ಮಂಡಿಗೆ ಭೇಟಿ ನೀಡಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 12 ಗಂಟೆ ಹೊತ್ತಿಗೆ 11,000 ಕೋಟಿ ರೂಪಾಯಿಗಳ ಮೌಲ್ಯದ ಜಲವಿದ್ಯುತ್ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಹಾಗೆಯೇ ಕಾರ್ಯಕ್ರಮಕ್ಕೂ ಮುನ್ನ, ಪ್ರಧಾನಿ ಮೋದಿ ಅವರು ಸುಮಾರು ಬೆಳಗ್ಗೆ 11:30 ಕ್ಕೆ ಹಿಮಾಚಲ ಪ್ರದೇಶ ಜಾಗತಿಕ ಹೂಡಿಕೆದಾರರ ಸಭೆಯ ಎರಡನೇ ಭೂಮಿ ಪೂಜೆ ಸಮಾರಂಭದ ಅಧ್ಯಕ್ಷತೆಯನ್ನು ಕೂಡಾ ವಹಿಸಲಿದ್ದಾರೆ.