News Karnataka Kannada
Monday, April 29 2024
ಹಿಮಾಚಲ ಪ್ರದೇಶ

ಶಿಮ್ಲಾದಲ್ಲಿ ವರುಣನ ಆರ್ಭಟ, ಬಹುಮಹಡಿ ಕಟ್ಟಡ ನೆಲಸಮ

New Project (1)
Photo Credit :

ಶಿಮ್ಲಾ : ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಾಗಿದ್ದು ಇದರಿಂದ   ಭೂಕುಸಿತ ಉಂಟಾಗಿದೆ , ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ.

ನಿನ್ನೆ ಸಂಜೆ 5.45ರ ಸುಮಾರಿಗೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಈ ಘಟನೆ ನಡೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದಾಗ್ಯೂ, ಘಟನೆಯ ಬಗ್ಗೆ ತನಿಖೆ ನಡೆಸಲು ಸರ್ಕಾರದಿಂದ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಭಾರದ್ವಾಜ್  ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

8 ಅಂತಸ್ತಿನ ಕಟ್ಟಡದ ಭಾಗಗಳು ಎರಡು ಎರಡು ಅಂತಸ್ತಿನ ಕಟ್ಟಡಗಳಿಗೆ ತಗುಲಿ ಹಾನಿಗೊಳಗಾದವು, ಹೋಟೆಲ್ ಸೇರಿದಂತೆ ಎರಡು ಪಕ್ಕದ ಕಟ್ಟಡಗಳು ಕೂಡ ಅಪಾಯದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲಾಡಳಿತವು ಕಟ್ಟಡಗಳ ಪ್ರತಿ ನಿವಾಸಿಗಳಿಗೆ ತಕ್ಷಣದ ಹಣಕಾಸಿನ ಸಹಾಯವಾಗಿ 10,000 ರೂಗಳನ್ನು ಒದಗಿಸಿದೆ ಎಂದು ಮೊಖ್ತಾ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು