ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ: 9 ಮಂದಿ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಬಸ್ತೇರಿ ಬಳಿ ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಟೆಂಪೊ ಟ್ರಾವಲರ್ ಮೇಲೆ ಭಾರಿ ಬಂಡೆಗಳು ಬಿದ್ದು ಈ ಅನಾಹುತ ಸಂಭವಿಸಿದೆ.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಾಂಗ್ಲಾ- ಚಿಟ್ಕುಲ್ ರಸ್ತೆಯ ಬಸ್ತೇರಿ ಬಳಿ ಮಧ್ಯಾಹ್ನ 1.25ಕ್ಕೆ ಭೂಕುಸಿತ ಸಂಭವಿಸಿದೆ. ಬಂಡೆಗಳು ಬಿದ್ದಿದ್ದರಿಂದ ಸೇತುವೆ ಕುಸಿದುಬಿದ್ದಿದೆ. ಪ್ರಯಾಣಿಕರು ಚಿಟ್‌ಕುಲ್‌ನಿಂದ ಸಾಂಗ್ಲಾಕ್ಕೆ ಹೋಗುತ್ತಿದ್ದರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಭೂಕುಸಿತದಿಂದ ಜನರು ಸಾವನ್ನಪ್ಪಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

‘ಗಾಯಾಳುಗಳ ಚಿಕಿತ್ಸೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮೃತರ ರಕ್ತಸಂಬಂಧಿಗಳಿಗೆ ತಲಾ ₹2 ಲಕ್ಷ, ಗಾಯಗೊಂಡವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ’ ಎಂದು ಪ್ರಧಾನಿ ತಿಳಿಸಿದ್ದಾರೆ.

Sampriya YK

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

12 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

23 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

37 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

54 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago