ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ ; ಮಣ್ಣಿನಡಿಯಲ್ಲಿ ಸಿಲುಕಿದ 40 ಜನರಿದ್ದ ಬಸ್‌

ಶಿಮ್ಲಾ: ದೇಶದ ವಿವಿಧೆಡೆ ಭಾರೀ ಮಳೆಯಿಂದ ಪ್ರಕೃತಿ ವಿಕೋಪಗಳು ಮುಂದುವರಿದಿದ್ದು, ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭೂಕುಸಿತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣೆಗಾಗಿ ಹರಸಾಹಸ ಮುಂದುವರಿದಿದೆ.
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ 40 ಪ್ರಯಾಣಿಕರೊಂದಿಗೆ ಕಿನ್ನೌರ್‌ನ ರೆಕಾಂಗ್ ಪಿಯೋದಿಂದ ಶಿಮ್ಲಾಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಡಿದಾದ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತು. ಕಲ್ಲುಬಂಡೆಗಳ ಮತ್ತು ಮಣ್ಣಿನ ಅವಶೇಷಗಳಡಿ ಬಸ್ ಸೇರಿದಂತೆ ಹಲವು ವಾಹನಗಳು ಸಿಲುಕಿವೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಕಲ್ಲುಗಳು ಉರುಳುತ್ತಿದ್ದ ಕಾರಣ ಕಾರ್ಯಾಚರಣೆಗೆ ಕೆಲ ಗಂಟೆಗಳ ಕಾಲ ಅಡ್ಡಿಯಾಗಿತ್ತು ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ತಿಳಿಸಿದ್ದಾರೆ.ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ರಕ್ಷಣಾ ದಳಗಳು ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿಸಿವೆ.

Indresh KC

Recent Posts

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

14 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

45 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

1 hour ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗುಜರಾತ್​​​​ ಟೈಟನ್ಸ್ ಗೆ 35 ರನ್‌ಗಳ ಜಯ

ಅಹ್ಮದಾಬಾದಿನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ವಿರುದ್ಧ ಗುಜರಾತ್​​​​ ಟೈಟನ್ಸ್​…

2 hours ago