News Karnataka Kannada
Monday, May 06 2024
ಹಿಮಾಚಲ ಪ್ರದೇಶ

ಮಳೆ ಅವಾಂತರಕ್ಕೆ ಹಿಮಾಚಲದಲ್ಲಿ 81 ಬಲಿ: 7.5 ಸಾವಿರ ಕೋಟಿ ನಷ್ಟ

himachal due to rain
Photo Credit : Twitter

ಶಿಮ್ಲಾ: ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಮಳೆಯ ಅವಾಂತರಕ್ಕೆ 81 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈಗಿಂತ ಆ.13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಬುಧವಾರ ಮೃತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಬಳಿಕ ಹೆಚ್ಚಿನ ಮೃತದೇಹಗಳು ಪತ್ತೆಯಾಗಿವೆ.

ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು