News Karnataka Kannada
Sunday, May 12 2024
ಹಿಮಾಚಲ ಪ್ರದೇಶ

ಹಿಮಾಚಲದ ಪ್ರದೇಶ| ಭೀಕರ ಅಪಘಾತವೊಂದು ಸಂಭವ: ಶಾಲಾ ಮಕ್ಕಳೂ ಸೇರಿದಂತೆ 16 ಮಂದಿ ಸಾವು

Car catches fire during match promotional event
Photo Credit : Wikimedia

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದ ಕುಲುವಿನ ಸೈನ್ಜ್ ಕಣಿವೆಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಒಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪಘಾತದ ಸ್ಥಳವು ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಮೂವರು ಗಾಯಗೊಂಡವರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು