ಹಿಮಾಚಲ ಪ್ರದೇಶ: ಚಂಬಾ ಜಿಲ್ಲೆಯಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 2.1 ರಷ್ಟು ಲಘು ಭೂಕಂಪ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ʻಹಿಮಾಚಲ ಪ್ರದೇಶದ ಚಂಬಾದಲ್ಲಿ ಮಂಗಳವಾರ(ಸೆ.19)ರ ರಾತ್ರಿ 9.15ರ ಸುಮಾರಿಗೆ ಭೂಮೇಲ್ಮೈಯಿಂದ 5 ಕಿಮೀ ಆಳದಲ್ಲಿ 2.1 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು IMD ಮಾಹಿತಿ ನೀಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.