ಶಿಮ್ಲಾ: ಅಪಘಾತ, 7 ಪ್ರವಾಸಿಗರ ಸಾವು, 10 ಮಂದಿಗೆ ಗಾಯ

ಶಿಮ್ಲಾ, ಸೆಪ್ಟೆಂಬರ್ 26: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಪ್ರವಾಸಿಗರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಟೆಂಪೋ ಟ್ರಾವೆಲರ್ ರಸ್ತೆಯಿಂದ ಜಾರಿ  ಜಲೋರಿ ಪಾಸ್ ಬಳಿಯ ಬೆಟ್ಟದಿಂದ ಉರುಳಿ ಬಿದ್ದಿದೆ.  ಪ್ರವಾಸಿಗರು  ಉತ್ತರ ಪ್ರದೇಶಕ್ಕೆ ಸೇರಿದವರಾಗಿದ್ದಾರೆ.

ಗಾಯಗೊಂಡವರಲ್ಲಿ ಹೆಚ್ಚಿನವರನ್ನು ರಾಜ್ಯ ರಾಜಧಾನಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಕುಲ್ಲು ಪಟ್ಟಣದ ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಪ್ರದೇಶದ ಜನರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago