News Karnataka Kannada
Saturday, April 13 2024
Cricket
ದೇಶ

ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ ಏರಿಕೆ; WHO ಆಘಾತಕಾರಿ ಮಾಹಿತಿ

ಭಾತರದಲ್ಲಿ ಕ್ಯಾನ್ಸರ್ ಪ್ರಮಾಣ ಏರಿಕೆಯಾಗುತ್ತಿದ್ದು, ೧೪.೧ ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ೯.೧ ಲಕ್ಷ ಜನ ಕ್ಯಾನ್ಸರ್ ನಿಂದ ನಿಧನರಾಗುತ್ತಿದ್ದು, ಸ್ತನದ ಕ್ಯಾನ್ಸರ್ ಅಧಿಕವಾಗುತ್ತಿದೆ ಎಂದು ತಿಳಿದುಬಂದಿದೆ.
Photo Credit : News Kannada

ನವದೆಹಲಿ: ಭಾತರದಲ್ಲಿ ಕ್ಯಾನ್ಸರ್ ಪ್ರಮಾಣ ಏರಿಕೆಯಾಗುತ್ತಿದ್ದು, ೧೪.೧ ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ೯.೧ ಲಕ್ಷ ಜನ ಕ್ಯಾನ್ಸರ್ ನಿಂದ ನಿಧನರಾಗುತ್ತಿದ್ದು, ಸ್ತನದ ಕ್ಯಾನ್ಸರ್ ಅಧಿಕವಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತು ಅಧ್ಯಯನ ನಡೆಸಿದ ಅಂತರಾಷ್ಟ್ರೀಯ ಸಂಸ್ಥೆ IARC, ಪುರುಷರಲ್ಲಿ ತುಟಿ, ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ಮಹಿಳೆಯರಲ್ಲಿ ಸ್ತನ ಹಾಗು ಗರ್ಭಕೊರಳಿನ ಕ್ಯಾನ್ಸರ್ ಹೆಚ್ಚಾಗಿ ವರದಿಯಾಗುತ್ತಿದೆ. ಹೊಸ ಪ್ರಕರಣಗಳ ಸಂಖ್ಯೆ ಶೇ.೨೭ ಹಾಗು ಶೇ.೧೮ರಷ್ಟಿದೆ ಎಂದು ಹೇಳಿದೆ.

ಕಳೆದ ಐದು ವರ್ಷಗಳಿಂದ ಕ್ಯಾನ್ಸರ್ ಗೆ ತುತ್ತಾದವರ ಸಂಖ್ಯೆ ೩೨.೬ ಲಕ್ಷಕ್ಕೆ ಏರಿಕೆಯಾಗಿದ್ದು, ಜಾಗತಿಕವಾಗಿ ಇದರ ಪ್ರಮಾಣ ೨ ಕೋಟಿಯಷ್ಟಿದೆ. ಸರಾಸರಿ ಪ್ರತಿ ಐವರಲ್ಲಿ ಒಬ್ಬರು ತಮ್ಮ ಜೀವಾವಧಿಯಲ್ಲಿ ಕ್ಯಾನ್ಸರ್ ಗೆ ಒಳಗಾಗುತ್ತಿದ್ದಾರೆ. ಪುರುಷರಲ್ಲಿ ಪ್ರತಿ ೯ ಜನರಲ್ಲಿ ಒಬ್ಬರು ಹಾಗು ಮಹಿಳೆಯರಲ್ಲಿ ಪ್ರತಿ ೧೨ರಲ್ಲಿ ಒಬ್ಬರು ಕ್ಯಾನ್ಸರ್ ನಿಂದ ಮೃತಪಡುತ್ತಿದ್ದಾರೆ.

ವಿಶ್ವದಲ್ಲಿ ಶ್ವಾಸಕೋಶ ಕ್ಯಾನ್ಸರ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ಅಧಿಕವಾಗಿದ್ದು, ಸ್ತನ ಕ್ಯಾನ್ಸರ್ ಕೂಡ ಅಧಿಕ ಪ್ರಮಾಣದಲ್ಲಿ ವರದಿಯಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು