News Karnataka Kannada
Sunday, April 28 2024
ದೇಶ

ಕೇಜ್ರಿವಾಲ್‌ ಬಂಧನ ಕುರಿತ ಹೇಳಿಕೆ: ಅಮೆರಿಕಾ ರಾಯಭಾರಿಗೆ ಭಾರತ ಸಮನ್ಸ್

New Project (5)
Photo Credit : NewsKarnataka

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿದೆ.

ಈ ಹಿನ್ನೆಲೆಯಲ್ಲಿ ಅಮೆರಿಕಾ ರಾಯಭಾರ ಕಚೇರಿಯ ಹಂಗಾಮಿ ಉಪಮುಖ್ಯಸ್ಥರು ಇಂದು ಸೌತ್‌ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಆದರೆ ಈ ಭೇಟಿ ವೇಳೆ ನಡೆದ ಮಾತುಕತೆಗಳ ವಿವರಗಳು ಬಹಿರಂಗಪಡಿಸಲಾಗಿಲ್ಲ.

ರಾಯಭಾರಿ ಕಚೇರಿಯ ವಕ್ತಾರರು ಮಾಹಿತಿ ನೀಡಿ, ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಬಗ್ಗೆ ‘ನ್ಯಾಯೋಚಿತ ಹಾಗೂ ಪಾರದರ್ಶಕತೆ ನ್ಯಾಯ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎನ್ನುವ ಹೇಳಿಕೆಯ ಬಗ್ಗೆ ಮೇಲ್ವಿಚಾರಣೆಯ ಬಗ್ಗೆ ಸಭೆ ಕರೆಯಲಾಗಿತ್ತು ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು