ಕೊಚ್ಚಿ: ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಶನಿವಾರ ತರಬೇತಿ ವೇಳೆ ಐಎನ್ ಎಸ್ ಗರುಡ ರನ್ ವೇಯಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಡೆದಿದೆ. ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ.
ಪ್ರತಿದಿನ ನಡೆಯುವ ನೌಕಾಪಡೆ ತರಬೇತಿ ವೇಳೆ ಈ ದುರ್ಘಟನೆ ನಡೆದಿದ್ದು ಗಾಯಗೊಂಡ ಇಬ್ಬರೂ ಇಲ್ಲಿನ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.