News Karnataka Kannada
Friday, May 17 2024
ದೇಶ

ಭಾರತದ ಸ್ಪ್ರಿಂಟ್ ಕ್ವೀನ್ ದ್ಯುತಿ ಚಂದ್​ಗೆ ನಾಲ್ಕು ವರ್ಷಗಳ ನಿಷೇಧ

India's sprint queen Dutee Chand banned for four years
Photo Credit : News Kannada

ದೆಹಲಿ: ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಂದ್ ಅವರು ಸ್ಪರ್ಧೆಯ ಹೊರಗೆ ಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾಗಿದ್ದಾರೆ. 2021 ರ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ 4 ರ ಸಮಯದಲ್ಲಿ 11.17 ಸೆಕೆಂಡ್‌ಗಳಲ್ಲಿ 100 ಮೀ ಓಡಿ ದ್ಯುತಿ ನೂತನ ದಾಖಲೆ ನಿರ್ಮಿಸಿದ್ದರು.

ದ್ಯುತಿ ಚಂದ್ ನಿಷೇಧವು ಜನವರಿ 3, 2023 ರಿಂದ ಪ್ರಾರಂಭವಾಗುತ್ತದೆ. ಜೊತೆಗೆ ಡಿಸೆಂಬರ್ 5, 2022 ರಿಂದ ಇವರ ಎಲ್ಲಾ ಸ್ಪರ್ಧಾತ್ಮಕ ಫಲಿತಾಂಶಗಳನ್ನು ಅನರ್ಹಗೊಳಿಸಲಾಗುತ್ತದೆ ಮತ್ತು ಟೈಮ್ಸ್‌ನ ವರದಿಯ ಪ್ರಕಾರ ದ್ಯತಿ ಪಡೆದುಕೊಂಡಿರುವ ಎಲ್ಲ ಪದಕಗಳು, ಅಂಕಗಳು ಮತ್ತು ಬಹುಮಾನಗಳನ್ನು ಕಳೆದುಕೊಳ್ಳುತ್ತಾರೆ.

ದ್ಯುತಿ ಅವರ ಮೂತ್ರದ ಮಾದರಿಯ ವರದಿಯು ಪಾಸಿಟಿವ್ ಬಂದಿದ್ದು, ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದು ಸಾಭೀತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈಗ ದ್ಯುತಿ ಚಂದ್‌ರನ್ನು ಅಮಾನತುಗೊಳಿಸಿರುವುದರಿಂದ ಅವರ ಕೆರಿಯರ್ ಮೇಲೆ ದೊಡ್ಡ ಹೊಡೆತಬಿದ್ದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು