News Karnataka Kannada
Saturday, May 04 2024
ದೇಶ

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್

Jack
Photo Credit : News Kannada

ನವದೆಹಲಿ: ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್, ತನ್ನ ಬಗ್ಗೆ ಮಾಧ್ಯಮಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹೇಳಿಕೆ ನೀಡದಂತೆ ತಕ್ಷಣವೇ ತಡೆ ನೀಡಬೇಕು ಎಂದು ಬಾಲಿವುಡ್ ನಟಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಆರೋಪಿಯ ಹೇಳಿಕೆಯಿಂದ ನನ್ನ ಸುರಕ್ಷತೆ ಮತ್ತು ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬಾಲಿವುಡ್ ನಟಿ ಹೇಳಿಕೊಂಡಿದ್ದಾರೆ. ಅಲ್ಲದೆ ಇದು ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ. ಮುಂದಿನ ವಿಚಾರಣೆಗಾಗಿ ನ್ಯಾಯಾಲಯವು ಪ್ರಕರಣವನ್ನು ಜನವರಿ 17ಕ್ಕೆ ಮುಂದೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು