ಶ್ರೀನಗರ: ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ.
ಭದ್ರತಾ ಪಡೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಚಕಮಕಿಯನ್ನು ನಡೆಸಿದ್ದು, ಈ ಸಮಯದಲ್ಲಿ ಇಬ್ಬರು ಭಯೋತ್ಪಾದಕರ ಸಾವನ್ನಪ್ಪಿದ್ದಾರೆ. ಆದರೆ ಅವರ ದೇಹಗಳು ಇನ್ನೂ ಪತ್ತೆಯಾಗಿಲ್ಲ, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗಡಿ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.