News Karnataka Kannada
Sunday, April 21 2024
Cricket
ಜಮ್ಮು-ಕಾಶ್ಮೀರ

ಈ ವರ್ಷ ಜಮ್ಮು-ಕಾಶ್ಮೀರದಲ್ಲಿ 62 ಉಗ್ರರ ಎನ್ ಕೌಂಟರ್

Untitled 144
Photo Credit :

ಶ್ರೀನಗರ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಉಗ್ರರ ಚಟುವಟಿಕೆಗಳು ವರದಿಯಾಗುತ್ತಿವೆ. ಈ ವರ್ಷ ಇಲ್ಲಿಯ ತನಕ 62 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಕಾಶ್ಮೀರದ ಐಜಿಪಿ ಈ ಕುರಿತು ಮಾಹಿತಿ ನೀಡಿದ್ದಾರೆ. “ಈ ವರ್ಷ ಇದುವರೆಗೂ 62 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ 47 ಜನರು ಸ್ಥಳೀಯರು ಮತ್ತು 15 ವಿದೇಶಿಯರು” ಎಂದು ಹೇಳಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತ್ಯೆಯಾದವರಲ್ಲಿ 39 ಮಂದಿ ಲಷ್ಕರ್ ಎ ತೋಯ್ಬಾ ಸಂಘಟನೆಯವರು. 15 ಉಗ್ರರು ಜೈಶೆ-ಮೊಹಮ್ಮದ್‌ ಸಂಘಟನೆಯವರು. 6 ಮಂದಿ ಹಿಜ್ಬುಲ್ ಮುಜಾಹಿದೀನ್ ಸಂಘನೆಯವರು.

ಎನ್‌ಕೌಂಟರ್‌ಗಳಲ್ಲಿ ಇಬ್ಬರು ಅಲ್ ಬಾರ್ಬರ್‌ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದುವರೆಗೂ ಹತ್ಯೆಯಾದ ಉಗ್ರರಲ್ಲಿ 47 ಜನರು ಸ್ಥಳೀಯರು ಮತ್ತು 15 ವಿದೇಶಿಯರು ಎಂದು ಐಜಿಪಿ ಮಾಹಿತಿ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು