News Karnataka Kannada
Thursday, April 18 2024
Cricket
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ ಇಬ್ಬರು ಉಗ್ರರ ಹತ್ಯೆ

Army..
Photo Credit :

ಶ್ರೀನಗರ: ಶನಿವಾರ ಭಾರತೀಯ ಸೇನಾಪಡೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿರ್ಹಾಮಾ ಪ್ರದೇಶ ಹಾಗೂ ಕುಲ್ಗಾಂನಲ್ಲಿ ಎನ್ಕೌಂಟರ್ ನಡೆಸಿದ್ದು,ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ  ಎಂದು ತಿಳಿದುಬಂದಿದೆ.

ಉಗ್ರರ ವಿರುದ್ಧ ಎನ್ಕೌಂಟರ್ ಆರಂಭಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅನಂತ್​ನಾಗ್ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿರ್ಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ​ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್​ಪಿಎಫ್​ನ ಜಂಟಿ ಪಡೆಯು ಕಾರ್ಯಾಚರಮೆ ಆರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳು ಶಂಕಿತರು ಇರುವ ಸ್ಥಳವನ್ನು ತಲುಪುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡಿದ್ದು, ಓರ್ವ ಎಲ್‌ಇಟಿ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಕುಲ್ಗಾಂನಲ್ಲಿಯೂ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಸ್ಥಳೀಯ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು